ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್ ಹೊಡೆದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 28 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. ಬಿಜೆಪಿಯವರು ಉತ್ತರ ಕೊಡುವುದೇ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 28 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಬಗ್ಗೆ ಚರ್ಚೆಯಾಗುತ್ತಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.
ಈ ಹೇಳಿಕೆಯಿಂದ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಪಾಕ್ ಮೀಡಿಯಾಗಳ ಕೂಡ ಇದನ್ನು ಪ್ರಸಾರ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈಗ ಸಿಎಂ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ ಎಂದಿದ್ದಾರೆ.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…