ರಾಜ್ಯ

ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು.

ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್‌ ದರ ಹೆಚ್ಚಳ ಮಾಡಲ್ಲ. ಈ ಬಗ್ಗೆ ಇಲಾಖೆಯೊಂದಿಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕು ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದರು.

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ, ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಅವರು ಇಂದು ಗೃಹ ರಾಜ್ಯ ಸರ್ಕಾರ 3 ರೂ. ಗಳಷ್ಟು ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಮಾಡಿದ್ದರೂ, ದಕ್ಷಿಣದ ಇತರ ರಾಜ್ಯಗಳು ಹಾಗೂ ಬಿಜೆಪಿ ಆಡಳಿತ ಇರುವ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಅಂಕಿ-ಅಂಶಗಳೊಂದಿಗೆ ಸ್ಪಷ್ಟ ಪಡಿಸಿದರು.

ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್‌ ಡೀಸೆಲ್‌ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ಈ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ಡಾ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್‌ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು.

ಈ ಬೆಲೆ ಏರಿಕೆಯಿಂದ ಸುಮಾರು 3,000 ಕೋಟಿ ರೂ. ಸಂಪನ್ಮೂಲ ದೊರೆಯಲಿದೆ. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ರೂ. ಅಗತ್ಯವಿದೆ. ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.

ಈ ಬೆಲೆ ಏರಿಕೆಯಿಂದ 3000 ಕೋಟಿ ಆದಾಯ ಬರಬಹುದು. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ಬೇಕು. ಯಾರಿಗೆ ಕೊಡುತ್ತಾ ಇದ್ದೇವೆ? ಶ್ರೀಮಂತರಿಗೆ ಕೊಡುತ್ತಾ ಇದ್ದೀವಾ?
ಅಂಬಾನಿ, ಅದಾನಿಗಳಿಗೆ ಸಾಲ ಮನ್ನಾ ಮಾಡ್ತಾ ಇದ್ದೀವಾ? ರೈತರ ಸಾಲ ಮನ್ನ ಮಾಡಿ ಎಂದರೆ ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇದೆಯೇ ಎಂದು ಟೀಕಿಸಿದರು.

ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ವಿವರಿಸಿದರು.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇ ನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಈ ಮಟ್ಟದ ಏರಿಕೆ ವಿರುದ್ಧ ಬಿಜೆಪಿಯವರಾಗಲೀ, ಆರ್.ಅಶೋಕ್ ಆಗಲಿ ಬಾಯಿ ಬಿಟ್ಟಿಲ್ಲ. ಅವರಿಗೆ ಅರ್ಥ ಆಗಿದ್ದರೆ ತಾನೆ ಎಂದು ಛೇಡಿಸಿದರು.

ಸಚಿವರಾದ ಚಲುವರಾಯಸ್ವಾಮಿ, ಬೈರತಿ ಸುರೇಶ್, ಶಾಸಕರಾದ ನರೇಂದ್ರಸ್ವಾಮಿ, ಗೋಪಾಲಕೃಷ್ಣ ಬೇಳೂರು ಸೇರಿ ಹಲವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

2 mins ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

39 mins ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

1 hour ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

5 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

5 hours ago