ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್-ಬಿಜೆಪಿ ನಡುವಿನ ಮೈತ್ರಿಯನ್ನು ಗೇಲಿ ಮಾಡಿದ್ದು, ಮೊನ್ನೆಯವರಿಗೆ ಬಿಜೆಪಿಯನ್ನು ಬೈದಾಡಿಕೊಂಡು ತಿರುಗುತ್ತಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರು ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಕಾಲೆಳೆದಿದ್ದಾರೆ. ನಿಜಕ್ಕೂ ಕುಮಾರಸ್ವಾಮಿಗೆ ಸ್ವಲ್ಪವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೇಲಿ ಮಾಡಿದ್ದಾರೆ.
2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80 ಸೀಟಿ ಸಿಕ್ಕಿದ್ದರೂ ಕುಮಾರಸ್ವಾಮಿ ಜೊತೆ ಬಿಜೆಪಿ ಜತೆ ಸೇರಬಾರದು ಅನ್ನೋ ಒಂದೇ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಮಾಡಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಅದಕ್ಕೆ ದೇವೆಗೌಡರ ಒಪ್ಪಿಗೆ ಸಹ ಇತ್ತು. 14 ತಿಂಗಳು ಕಾಲ ಚೆನ್ನಾಗಿ ನಡೆದಿದ್ದ ಸರ್ಕಾರವನ್ನು ಬೀಳಿಸಿದ್ದು ಯಡಿಯೂರಪ್ಪ ಎಂದು ಸಿದ್ದರಾಮಯ್ಯ ಗಟ್ಟಿಧ್ವನಿಯಲ್ಲಿ ಹೇಳಿದರು.
ಕುಮಾರಸ್ವಾಮಿ ಮತ್ತು ದೇವೇಗೌಡ ಅವರಿಗೆ ಕೊಂಚವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಮೈತ್ರಿ ಬೆಳೆಸುತ್ತಿರಲಿಲ್ಲ ಎಂದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…