ರಾಜ್ಯ

ವಿದ್ಯಾರ್ಥಿಗಳಿಗೆ ಸಂವಿಧಾನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ. ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದಿದ್ದಾರೆ.

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತು ಹಾಗೂ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದ್ದಾರೆ.

ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ 42ನೇ ತಿದ್ದುಪಡಿಯ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ಸೇರ್ಪಡೆಯಾಯಿತು. ಅದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು. ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಈ ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವುಗಳನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಅಲ್ಲದೇ ಸಂವಿಧಾನದ ಧ್ಯೇಯೋದ್ದೇಶ ಹಾಗೂ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

45 mins ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

47 mins ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

50 mins ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

51 mins ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

53 mins ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

1 hour ago