ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆ ವೇಳೆ ಏರ್‌ಶೋ ಆಯೋಜಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಬುಧವಾರ ಸಂಜೆ 4.30ಕ್ಕೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ, ಏರ್‌ಶೋ ನಡೆಸಲು ಅನುಮತಿ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಾರಿಯ ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಏರ್‌ಶೋಗೆ ಅನುಮತಿ ಕೊಟ್ಟರೆ, ಈ ಬಾರಿಯ ಮೈಸೂರು ದಸರಾ ಮತ್ತಷ್ಟು ಮೇಳೈಸಲಿದೆ.





