ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆಯಲ್ಲಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್ ಮಾಡಲಾಗಿತ್ತು. ಸದ್ಯ ಸಿಎಂಗೆ ಯಾವುದ ಸಮಸ್ಯೆಯಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದರು.
ಆದ್ದರಿಂದ ಇಂದು ಯಾವುದೇ ಸಭೆ, ಕಾರ್ಯಕ್ರಮಗಳು ಕೂಡ ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ಶೋ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹೈಕಮಾಂಡ್ ಭೇಟಿಗೂ ಸಮಯ ಕೇಳಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ವಿಧಾನಪರಿಷತ್ ಸ್ಥಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.





