ರಾಜ್ಯ

ಇಂದು ಇಡೀ ದಿನ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ: ನಾಳೆ ದೆಹಲಿಗೆ ಪ್ರಯಾಣ

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆಯಲ್ಲಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿತ್ತು. ಸದ್ಯ ಸಿಎಂಗೆ ಯಾವುದ ಸಮಸ್ಯೆಯಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದರು.

ಆದ್ದರಿಂದ ಇಂದು ಯಾವುದೇ ಸಭೆ, ಕಾರ್ಯಕ್ರಮಗಳು ಕೂಡ ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ಶೋ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಹೈಕಮಾಂಡ್‌ ಭೇಟಿಗೂ ಸಮಯ ಕೇಳಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ವಿಧಾನಪರಿಷತ್‌ ಸ್ಥಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

14 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago