Mysore
29
few clouds

Social Media

ಗುರುವಾರ, 29 ಜನವರಿ 2026
Light
Dark

ಆಗಸ್ಟ್.‌1ರಂದು ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

siddaramaiah

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್‌.1ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಆಗಸ್ಟ್‌.1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ “ಬ್ರಿಡ್ಜ್‌ ಟು ಬೆಂಗಳೂರು” ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಹ ಪಾಲ್ಗೊಳ್ಳಲಿದ್ದಾರೆ.

ಆಗಸ್ಟ್‌.2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.

ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.

Tags:
error: Content is protected !!