siddaramaiah
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್.1ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಆಗಸ್ಟ್.1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ “ಬ್ರಿಡ್ಜ್ ಟು ಬೆಂಗಳೂರು” ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಹ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್.2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.
ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…