ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಟೆನ್ಷನ್ ನಡುವೆಯೂ ಸಿಎಂ ಸಿದ್ದು ಆಗಸ್ಟ್.23ಕ್ಕೆ ದೆಹಲಿಗೆ ತೆರಳಲಿದ್ದು, ಎಲ್ಲರಲ್ಲೂ ಭಾರೀ ಕುತೂಹಲ ಮೂಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಈ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿದ್ದು, ರಾಜ್ಯಪಾಲರ ವಿರುದ್ಧ ಸಿಎಂ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಆಗಸ್ಟ್.23ಕ್ಕೆ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ವಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿವೆ. ಆದರೆ ಸಿಎಂ ಸಿದ್ದರಾಮಯ್ಯ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ರಾಜ್ಯಪಾಲರ ವಿರುದ್ಧವೇ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ನಾಳೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಆಗಸ್ಟ್.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್ ನಾಯಕರ ಜೊತೆ ಪ್ರಾಸಿಕ್ಯೂಷನ್ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.





