ರಾಜ್ಯ

ಭ್ರಷ್ಟಾಚಾರ ರಹಿತ ಕೆಪಿಎಸ್‌ಸಿ ಪರೀಕ್ಷೆ ನಡೆಸಲು AI ತಂತ್ರಜ್ಞಾನ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿ.ಸಿ. ಹೋಟಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಅನೇಕ ಮುಖ್ಯ ಸುಧಾರಣೆಗಳನ್ನು ಜಾರಿಮಾಡಿದೆ. ಅವುಗಳಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಸಂದರ್ಶನವನ್ನು ರದ್ದುಗೊಳಿಸುವುದು. ಜೊತೆಗೆ ಗ್ರೂಪ್ ಬಿ ಹುದ್ದೆಗಳಿಗೆ ಹಾಗೂ ಗೆಜೆಟೆಡ್ ಪ್ರೋಬೇಶನರ್ಸ್ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕಗಳನ್ನು ಕಡಿತಗೊಳಿಸಲಾಗುವುದು. ನ್ಯಾಯಯುತ ಹಾಗೂ ಪಾರದರ್ಶಕತೆಯನ್ನು ಪ್ರೋತ್ಸಾಹಿಸಲು ನೇಮಕಾತಿ ಮಾದರಿಗಳನ್ನು ಸರಳೀಕೃತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಲೋಕಸೇವಾ ಆಯೋಗಗಳು ನ್ಯಾಯಪರತೆ ಹಾಗೂ ಅರ್ಹತೆಯನ್ನು ಎತ್ತಿ ಹಿಡಿದು ಕಾರ್ಯಾಂಗಕ್ಕೆ ಅಭೂತ ಪೂರ್ವ ಕೊಡುಗೆ ನೀಡುವಂತಹ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ. ಅಲ್ಲದೇ ಸಾರ್ವಜನಿಕ ಸೇವೆ ಕಾರ್ಯ ಮಾಡುವಲ್ಲಿ ನಮ್ಮ ರಾಜ್ಯಕ್ಕೆ ಶ್ರೀಮಂತ ಐತಿಹ್ಯವಿದೆ. ಕರ್ನಾಟಕ ಲೋಕ ಸೇವಾ ಆಯೋಗ 2021ರಲ್ಲಿ ತನ್ನ ನಿಯಮಗಳನ್ನು ಪರಿಚಯಿಸಿದ್ದು, ಇದು ವ್ಯಕ್ತಿತ್ವ ಪರೀಕ್ಷೆಯ ಮೌಲ್ಯಕ್ಕಿಂತ, ಪ್ರಮಾಣೀಕರಿಸಿದ ಪ್ರಕ್ರಿಯೆಗಳಿಗೆ ಒತ್ತು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆಗಳಂತಹ ಸವಾಲುಗಳನ್ನು ಎದುರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಹೀಗಾಗಿ ಪಾರದರ್ಶಕತೆಯನ್ನು ಖಾತ್ರಿಗೊಳಿಸಲು ಹಾಗೂ ಸಾರ್ವಜನಿಕರ ವಿಶ್ವಾಸಗಳಿಸಲು ಸದೃಢವಾದ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗವೂ, ನ್ಯಾಯಯುತ ಹಾಗೂ ತ್ವರಿತ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುವಂತೆ ಬೇಡುತ್ತದೆ. ಈ ಕಾರಣಕ್ಕೆ ಯುಪಿಎಸ್‌ಸಿ ನಡೆಸುವಂತೆ ಸಕಾಲಕ್ಕೆ ಫಲಿತಾಂಶ ಪ್ರಕಟಿಸಲು ಮಾದರಿಯಾಗಬಲ್ಲದು. ಅಲ್ಲದೇ ಕೆಪಿಎಸ್‌ಸಿ ಆಯೋಗಗಳ ವಿರುದ್ಧ ಇರುವ ಬ್ಯಾಕ್ ಲಾಗ್ ಪ್ರಕರಣಗಳನ್ನು ಬಗೆಹರಿಸುವುದು ದಕ್ಷತೆಯ ಸುಧಾರಣೆ ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನುಗಳಿಸಿಕೊಳ್ಳಲು ಮುಖ್ಯವಾಗಿದೆ. ಕೆಪಿಎಸ್‌ಸಿಯನ್ನು ಸದೃಢಗೊಳಿಸಲು ಹೆಚ್ಚಿನ ಸಂಪನ್ಮೂಲಗಳು, ಸಿಬ್ಬಂದಿ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕೆಪಿಎಸ್‌ಸಿ ಪರೀಕ್ಷೆ AI ಅವಳಡಿಕೆ

ದೇಶದ ಬೇರೆ ಬೇರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುವುದು. ಇದರಿಂದ ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು. ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಜಿಸುವ ಮುಖಾಂತರ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾದ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ನಂಬಿಕೆಯಿರಿಸಿದೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯದಲ್ಲಿ ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಉತ್ತಮ ಗುಣಮಟ್ಟದ ಸೇವೆಗಾಗಿ ತರಬೇತಿ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ನಡೆಯುತ್ತಿರುವ ಸಮ್ಮೇಳನದ ಮೂಲಕ ಶಕ್ತಿ ತುಂಬಲಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

5 mins ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

9 mins ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

15 mins ago

ಉದ್ಘಾಟನಾ ಪಂದ್ಯದಲ್ಲಿ ಮಿಂಚಿದ ಆರ್‌ಸಿಬಿ

ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್…

26 mins ago

ವೈರಮುಡಿ ಬ್ರಹ್ಮೋತ್ಸವ

ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ…

30 mins ago