Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಾನು ಜೆಡಿಎಸ್‌ ಪಕ್ಷ ಬಿಡಲಿಲ್ಲ, ನನ್ನನ್ನು ಉಚ್ಛಾಟಿಸಲಾಯಿತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಲಾಯಿತೇ ಹೊರತು ನಾನು ಪಕ್ಷವನ್ನು ತೊರೆದು ಬರಲಿಲ್ಲ. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳುವುದಾದರೆ ಮಾಧ್ಯಮಗಳು ಯಾಕಿರಬೇಕು? ಎಂದು ಪ್ರಶ್ನಿಸಿದರು.

ಜೆಡಿಎಸ್ ಪಕ್ಷವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ?ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಆದೇಶ ಹೊರಡಿಸಿದೆ ಎಂದರು.

ಜೆಡಿಎಸ್ನವರಿಗೆ ಪಕ್ಷವನ್ನು ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಪಕ್ಷದಲ್ಲೇ ಇರಲಿಲ್ಲ . ಎಚ್‌.ಡಿ.ದೇವೇಗೌಡರು, ನಾನು, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಪಕ್ಷವನ್ನು ಕಟ್ಟಿದ್ದು. ಆ ವೇಳೆ ಎಚ್‌.ಡಿ.ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಯೇನು?
ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷ ತೊರೆದು ಹೋಗುವಾಗ ಮಾಡಿದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದೇ ಸಂದರ್ಭದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧದ ಎಫ್‌ಐಆರ್‌ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಮಿತಿಯಲ್ಲಿ ಬಂದರೆ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

 

 

 

 

Tags: