ಬೆಂಗಳೂರು: ನಾನು ಜೆಡಿಎಸ್ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಲಾಯಿತೇ ಹೊರತು ನಾನು ಪಕ್ಷವನ್ನು ತೊರೆದು ಬರಲಿಲ್ಲ. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳುವುದಾದರೆ ಮಾಧ್ಯಮಗಳು ಯಾಕಿರಬೇಕು? ಎಂದು ಪ್ರಶ್ನಿಸಿದರು.
ಜೆಡಿಎಸ್ ಪಕ್ಷವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ?ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಆದೇಶ ಹೊರಡಿಸಿದೆ ಎಂದರು.
ಜೆಡಿಎಸ್ನವರಿಗೆ ಪಕ್ಷವನ್ನು ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಪಕ್ಷದಲ್ಲೇ ಇರಲಿಲ್ಲ . ಎಚ್.ಡಿ.ದೇವೇಗೌಡರು, ನಾನು, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಪಕ್ಷವನ್ನು ಕಟ್ಟಿದ್ದು. ಆ ವೇಳೆ ಎಚ್.ಡಿ.ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯೇನು?
ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷ ತೊರೆದು ಹೋಗುವಾಗ ಮಾಡಿದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದೇ ಸಂದರ್ಭದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧದ ಎಫ್‌ಐಆರ್ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಮಿತಿಯಲ್ಲಿ ಬಂದರೆ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…