ರಾಜ್ಯ

ಮನಮೋಹನ್‌ ಸಿಂಗ್‌ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದವರು: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮನಮೋಹನ್‌ ಸಿಂಗ್‌ ಅವರ ಅಗಲಿಕೆ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ದೊಡ್ಡಹಾನಿ. ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 2ನೇ ದಿನ ನಡೆಯಬೇಕಿದ್ದ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸಕ್ಕಾಗಿ ಸಿ.ಪಿ.ಇಡಿ ಮೈದಾನದಲ್ಲಿ ಗಾಂಧಿ ಭಾರತ ವೇದಿಕೆಯಲ್ಲಿ ಇಂದು(ಡಿಸೆಂಬರ್‌.27) ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮನಮೋಹನ ಸಿಂಗ್‌ ಅವರ ಸಂತಾಪ ಸಭೆಯಲ್ಲಿ ಮಾತನಾಡಿದ್ದಾರೆ.

ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು. ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗುತ್ತದೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ವಿಶ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ ಬೆಳೆದು, ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ, ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು ಎಂದು ಹೇಳಿದ್ದಾರೆ.

ನಾನು ಹಲವು ಬಾರಿ ಸಿಂಗ್‌ರನ್ನು ಭೇಟಿಯಾಗಿದ್ದೆ. ಅವರು ಆ ವೇಳೆಗಳಲ್ಲಿ ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿರುವ ಅವರು ಆರ್.ಬಿ.ಐ ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು ಎಂದಿದ್ದಾರೆ.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಒದಗಿಬಂದ ಅವಕಾಶವನ್ನು ಸಂಪೂರ್ಣ ಸದುಪಯೋಗ ಮಾಡಿಕೊಂಡು ಹತ್ತು ವರ್ಷಗಳ ಕಾಲ ಅಂದರೆ 2 ಬಾರಿ ಪ್ರಧಾನ ಮಂತ್ರಿಯಾಗಿ ದೇಶವನ್ನು ಅತ್ಯಂತ ಸದೃಢವಾಗಿ ಮುನ್ನಡೆಸಿದರು. ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು ಎಂದು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತಗೊಳಿಸಿರಲಿಲ್ಲ. ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು. ಆದರೆ ಇಂದು ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಮ್ಮ ಸರ್ಕಾರ ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಜೊತೆಗೆ ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂತ ಸದೃಢವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ಅತ್ಯಂತ ವಿನಯಶೀಲರಾಗಿದ್ದರು. ತಾವು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago