ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆಯ ಪ್ರಯತ್ನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯವಿರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಕೇರಳ ಸರ್ಕಾರ ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾಪವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಸಹ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾಪದಲ್ಲಿ ಪರಿಹಾರವೇ ಇಲ್ಲ ಎಂದರು. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣೆ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…