ರಾಜ್ಯ

ಒಂದು ದೇಶ, ಒಂದು ಚುನಾವಣೆ| ಪ್ರಜಾಪ್ರಭುತ್ವ, ರಾಜ್ಯ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆಯ ಪ್ರಯತ್ನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯವಿರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಕೇರಳ ಸರ್ಕಾರ ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾಪವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಸಹ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾಪದಲ್ಲಿ ಪರಿಹಾರವೇ ಇಲ್ಲ ಎಂದರು. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣೆ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago