ರಾಜ್ಯ

ಪ್ರಧಾನಿ ಮೋದಿ ಭೇಟಿಯಾಗಲು ದೆಹಲಿಗೆ ಹೊರಟ ಸಿದ್ದರಾಮಯ್ಯ

ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ  ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ , ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ. ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚೆ ಮಾಡುತ್ತೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಇದೇ ವೇಳೆ ಪ್ರಸ್ತಾಪಿಸುತ್ತೇನೆ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago