ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಶುಕ್ರವಾರ (ಜು.೧೯) ಬಿಡುಗಡೆಗೊಳಿಸಿದರು. ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವಂತೆ ಸಿಎಂ ಶುಭ ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕೃಷಿ ಸಚಿವ ಚಲುವರಾಯಸ್ವಾಮಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಉಪಸ್ಥಿತರಿದ್ದರು.
ಇದೇ ಡಿಸೆಂಬರ್ 20, 21 ಮತ್ತು 22 ರಂದು ಮಂಡ್ಯ ಜಿಲ್ಲೆಯಲ್ಲಿ ಈ ಬಾರಿಯ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ.