ರಾಜ್ಯ

ಸಾಹಿತ್ಯ ಸಮ್ಮೇಳನದ ಲೋಗೋ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಶುಕ್ರವಾರ (ಜು.೧೯) ಬಿಡುಗಡೆಗೊಳಿಸಿದರು. ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಅವರಿಗೆ ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವಂತೆ ಸಿಎಂ ಶುಭ ಕೋರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕೃಷಿ ಸಚಿವ ಚಲುವರಾಯಸ್ವಾಮಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಉಪಸ್ಥಿತರಿದ್ದರು.

ಇದೇ ಡಿಸೆಂಬರ್‌ 20, 21 ಮತ್ತು 22 ರಂದು ಮಂಡ್ಯ ಜಿಲ್ಲೆಯಲ್ಲಿ ಈ ಬಾರಿಯ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರತಿ ಉಕ್ಕಡ| ಅಹಲ್ಯಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್‌

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು…

16 mins ago

ಮೋಹನ್‌ ಭಾಗವತ್‌ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌…

54 mins ago

ಚುನಾವಣಾ ನಿಯಮಗಳಿಗೆ ತಿದ್ದುಪಡಿ| ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ…

1 hour ago

ಜನವರಿ.25ರಂದು ಶಿವರಾಜ್‌ ಕುಮಾರ್‌ ಬೆಂಗಳೂರಿಗೆ ಆಗಮನ: ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಶಿವಣ್ಣಗೆ ಆರು ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ…

1 hour ago

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶಾಸಕರ ಅಭಿಪ್ರಾಯ ಕೇಳಿ: ಹೈಕಮಾಂಡ್‌ಗೆ ಸತೀಶ್‌ ಜಾರಕಿಹೊಳಿ ಆಗ್ರಹ

ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ…

2 hours ago

ಜ.26ರ ಗಣರಾಜ್ಯೋತ್ಸವಕ್ಕೆ ಅದ್ದೂರಿ ಸಿದ್ಧತೆ: ಅಪರ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳಿಗೆ ಮಹತ್ವದ ಸೂಚನೆ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಈ ಬಾರಿಯ ಗಣರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಧ್ವಜಾರೋಹಣವನ್ನು…

2 hours ago