ರಾಜ್ಯ

ರಾಜ್ಯದಲ್ಲಿ ಪ್ರವಾಸೋದ್ಯಮ ಅತ್ಯಂತ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮೀ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.

ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು. ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು

ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015ನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು.

ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

2 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

6 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

13 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

19 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago