cm siddaramaiah
ಬೆಂಗಳೂರು: ಮಾವಿನಹಣ್ಣುಗಳ ಬೆಲೆ ಮಾರುಕಟ್ಟೆಯಲ್ಲಿ ತೀವ್ರವಾಗಿ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ತುರ್ತು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಮಾವಿನಹಣ್ಣು ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಕ್ಕೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ 1.39 ಲಕ್ಷ ಹೆಕ್ಟೇರ್ನಲ್ಲಿ ಮಾವು ಬೆಳೆಯುತ್ತಿದ್ದು, ಸರಿಸುಮಾರು 8 ರಿಂದ 10 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ನಿರೀಕ್ಷೆ ಇದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಗಳಲ್ಲಿ ಮಾವು ಹೆಚ್ಚಿನ ಉತ್ಪಾದನೆಯಾಗಿದೆ ಎಂದು ತಿಳಿಸಿದ್ದಾರೆ.
ಮೇ, ಜೂನ್ ತಿಂಗಳಿನಲ್ಲಿ ಮಾವಿನಹಣ್ಣಿನ ಮಾರುಕಟ್ಟೆ ಸಹಜವಾಗಿ ಪ್ರತಿ ಕ್ವಿಂಟಾಲ್‍ಗೆ 12 ಸಾವಿರ ರೂ.ಗಳಿರುತ್ತದೆ. ಪ್ರಸ್ತುತ ಅದು 3 ಸಾವಿರಕ್ಕೆ ಕುಸಿದಿದೆ. ಕರ್ನಾಟಕ ರಾಜ್ಯ ಕೃಷಿ ಮೌಲ್ಯ ಆಯೋಗದ ವರದಿಯ ಪ್ರಕಾರ ಪ್ರತೀ ಕ್ವಿಂಟಾಲ್ ಮಾವು ಉತ್ಪಾದನೆಗೆ 5,460 ರೂ.ಗಳ ವೆಚ್ಚವಾಗುತ್ತಿದೆ. ಉತ್ಪಾದನೆ ಮತ್ತು ಮಾರುಕಟ್ಟೆ ದರದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಿ ಮಾವು ಖರೀದಿಯನ್ನು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…