Mysore
23
broken clouds

Social Media

ಬುಧವಾರ, 08 ಏಪ್ರಿಲ 2026
Light
Dark

ರೊಟೀನ್‌ ಚೆಕಪ್‌ಗಾಗಿ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್‌ ಚೆಕಪ್‌ಗಾಗಿ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್‌ ಆಸ್ಪತ್ರೆಗೆ ತೆರಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು.

ಬಳಿಕ ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಡಿಕೆಶಿ ಕೂಡ ಹೈಕಮಾಂಡ್‌ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

Tags:
error: Content is protected !!