ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಯ್ಯ ಅವರಿಂದು ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹೋದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ್ ಪಡೆದು ಪೂಜೆ ಸಲ್ಲಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಿನಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದು ಬರೆದುಕೊಂಡಿದ್ದಾರೆ.





