ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಕ್ಯಾಬಿನೆಟ್ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಕೆ.ಸಿ.ವೇಣುಗೋಪಾಲ್ ಮಾತನಾಡಿದ್ದಾರೆ.
ನೀವು ಯಾರೂ ಕೂಡ ಇನ್ನು ಮುಂದೆ ಸಭೆ ಸೇರುವುದು, ಎಲ್ಲೆಂದರಲ್ಲಿ ಮಾತನಾಡುವುದು ಬೇಡ. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದರು.
ಯಾರು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡ್ತಾರೋ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನು ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ ಎಂದು ಮಾಹಿತಿ ನೀಡಿದರು.