ರಾಜ್ಯ

ವಕ್ಫ್‌ ವಿವಾದ ಬಿಜೆಪಿ ವಿರುದ್ಧವೇ ಸಿಎಂ ಸಿದ್ದರಾಮಯ್ಯ ಪ್ರತ್ಯಸ್ತ್ರ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ.ಆಮಿಷವೊಡ್ಡಿದ್ದರೆಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಹೀಗಾಗಿ ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್‌ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ನಾ ಖಾವೂಂಗಾ, ನಾ ಖಾನೆ ದೂಂಗಾ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಪ್ರಶ್ನಿಸಿದ್ದಾರೆ.

ವಿಜಯೇಂದ್ರ ಅವರು ವಕ್ಫ್‌ ಆಸ್ತಿ ವಿಚಾರದಲ್ಲಿ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅಲ್ಲದೇ ಅವರೊಂದಿಗೆ ಬಿಜೆಪಿ ಪಕ್ಷದ ಕೆಲ ನಾಯಕರೂ ಸಹ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್‌ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಜೊತೆಗೆ ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಫ್‌ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಆಗ್ರಹ ಮಾಡಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

15 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

15 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

15 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

16 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

16 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

22 hours ago