Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಾಜಿ ಶಾಸಕ ಆರ್‌.ವಿ.ದೇವರಾಜ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಂಎಲ್‌ಎ ಹಾಗೂ ಎಂಎಲ್‌ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಆರ್.‌ವಿ.ದೇವರಾಜ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಇದನ್ನೂ ಓದಿ:-ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್ ಎ ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜುಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

Tags:
error: Content is protected !!