ಬೆಂಗಳೂರು: ಎಂಎಲ್‌ಎ ಹಾಗೂ ಎಂಎಲ್‌ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ಇದನ್ನೂ ಓದಿ:-ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್ ಎ ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜುಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…