Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

Mysore Muda case: Supreme Court gives big relief to CM Siddaramaiah's wife

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವುದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ಇಂದು ನಡೆಯಿತು.

ಬಿ ರಿಪೋರ್ಟ್‌ ಸಂಬಂಧ ಜನವರಿ.22ರಂದು ಆದೇಶ ನೀಡುವುದಾಗಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ತಿಳಿಸಿದ್ದಾರೆ.

 

 

Tags:
error: Content is protected !!