ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆ ಯಾವಾಗ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿವೆ.
ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಕೂಡ ಇದಕ್ಕೆ ಸಂಪೂರ್ಣ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೇನೆ ಎಂದರು.
ಈ ಯೋಜನೆ ಮೂಲಕ ನೀರನ್ನು ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದೆ. ಆ ಎಲ್ಲಾ ಸಮಸ್ಯೆಗಳನ್ನು ಸಹ ನಾವು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಮಾಹಿತಿ ನೀಡಿದರು.
ಗೌರಿ ಹಬ್ಬದಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಎಲ್ಲಾ ನಾಯಕರು ಹಾಗೂ ರೈತರಿಗೆ ಆಹ್ವಾನಿಸಿದ್ದೇವೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಹ್ವಾನ ನೀಡುವಂತೆ ತಿಳಿಸಿದ್ದೇನೆ. ಈ ಪವಿತ್ರ ಕಾರ್ಯಕ್ಕೆ ಎಲ್ಲರೂ ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…