ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ.
ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.
ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಕಳೆದ ವಾರ ಜಿಲ್ಲಾಡಳಿತದ ವತಿಯಿಂದ ಬೈಕ್ ರ‍್ಯಾಲಿ, ತುಂಗಾ ಆರತಿ, ವಿವಿಧ ಕಲೆಗಳ ಪ್ರದರ್ಶನದಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.
ಹೊಸಪೇಟೆ ರಸ್ತೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರ
ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ವಿವಿಧ ಸಾಂಸ್ಕೃತಿಕ ತಂಡಗಳನ್ನು ನಿಯೋಜಿಸಲಾಗಿದೆ. ಹೊಸಪೇಟೆಯ ರಸ್ತೆಗಳಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವ ನಡೆಯುತ್ತಿತ್ತು. ಆದರೆ ಸರ್ಕಾರಗಳು ಬದಲಾದಂತೆ ದಿನಾಂಕಗಳನ್ನು ಸಹ ಬದಲಾಯಿಸಲಾಗಿದೆ.
ಹೆಲಿ ರೈಡ್ ವ್ಯವಸ್ಥೆ
ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಆಕಾಶದಿಂದ ನೋಡಿ ಆನಂದಿಸಲು ಇಚ್ಛಿಸುವ ಪ್ರವಾಸಿಗರಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಯಾಣಿಕರಿಗೆ 4,229 ರೂ. ನಿಗದಿಪಡಿಸಲಾಗಿದೆ. ಹೆಲಿಕಾಪ್ಟರ್ ರೈಡ್ಗೆ ಪ್ರತಿ ಬಾರಿ ಐದರಿಂದ ಆರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಪ್ರವಾಸಿಗರ ಬೇಡಿಕೆ ಆಧಾರದ ಮೇಲೆ ಹೆಚ್ಚುವರಿ ಬಸ್ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…