ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ ಒಳ್ಳೆಯ ಬಜೆಟ್ ಸಿಗುವ ವಿಶ್ವಾಸವಿದೆ ಎಂದರು.
ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುವುದು ಒಂದು ರೆಕಾರ್ಡ್ ಬ್ರೇಕ್ ಆಗಲಿದೆ. ಅವರಿಗೆ ಅನುಭವ, ಒತ್ತಡ ಸಹ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡ ಉಳಿಯಬೇಕಿದೆ. ಇದಕ್ಕಾಗಿ ಹೋರಾಟಗಾರರು ಹೋರಾಟ ಮಾಡುವುದು ಸಹಜ. ಕೆಲವರು ಆಗಾಗ್ಗೆ ಪುಂಡಾಟಿಕೆ ಮಾಡುತ್ತಿರುತ್ತಾರೆ. ಆ ಕುರಿತು ಕಾನೂನಿನಂತೆ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.