ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.




