Mysore
29
few clouds

Social Media

ಭಾನುವಾರ, 17 ಮೇ 2026
Light
Dark

FILM FESTIVAL| ಶಬಾನ ಅಜ್ಮಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತದ ಹೆಸರಾಂತ ಚಲನಚಿತ್ರ ನಟಿ ಶಬನಾ ಅಜ್ಮಿ ಅವರು ರಾಜ್ಯ ಸರ್ಕಾರದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

Tags:
error: Content is protected !!