ಬೆಂಗಳೂರು: ಭಾರತದ ಹೆಸರಾಂತ ಚಲನಚಿತ್ರ ನಟಿ ಶಬನಾ ಅಜ್ಮಿ ಅವರು ರಾಜ್ಯ ಸರ್ಕಾರದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…
ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ ಚಾಮರಾಜನಗರ: ಬಿಸಿಲ ತಾಪ…
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…