ರಾಜ್ಯ

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. 2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು.

ಇದನ್ನೂ ಓದಿ:  ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನ ಮತ್ತೆ ಸೇರಿದಾಗ ಮಾತನಾಡಿದ ಮುಖ್ಯಮಂತ್ರಿಗಳು, ನಂತರ ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ವಿರೋಧ ಪಕ್ಷದವರು ಮಾತನಾಡುವಾಗ ಸುಮ್ಮ ಸುಮ್ಮನೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ನಾಯಕರು ಮಣಿದಾಗ ಮಾತ್ರ ಮಾತನಾಡಬೇಕು. ಯಾರೇ ಆದರೂ ಚರ್ಚೆಗೆ ಅಡ್ಡಿಪಡಿಸಬಾರದು ಎಂದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

14 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

21 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

21 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

21 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

21 hours ago