ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್‌ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ:-ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ
ತಂದೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಂದೆಯವರ ಆರೋಗ್ಯ ಚೆನ್ನಾಗಿದೆ. ಗ್ಯಾಸ್ಟ್ರೋಕೇಷನ್ ಇನ್ಫೆಕ್ಸನ್ ಆಗಿದೆ. ಡೈರಿಯಾ ಸಮಸ್ಯೆ ತರ ಆಗಿದೆ. ವೈದ್ಯರು ತಪಾಸಣೆ ಮಾಡಿ ಮಾತ್ರೆಗಳನ್ನು ಕೊಟ್ಟಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಅಧಿವೇಶನಕ್ಕೆ ಬರ್ತಾರೆ ಎಂದ ಸ್ಪಷ್ಟಪಡಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…