ರಾಜ್ಯ

ಸಿಎಂ ಸಿದ್ದರಾಮಯ್ಯ ದಿಡೀರ್ ದಿಲ್ಲಿ ಪ್ರವಾಸ

ಬೆಂಗಳೂರು : ಸಚಿವ ಸಂಪುಟ ಸಭೆಯ ಬಳಿಕ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಗೊಳಿಸಿ ಸಾರ್ವಜನಿಕರ ಭೇಟಿಯಿಂದಲೂ ಹಿಂದೆ ಸರಿದಿದ್ದು ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ದಿಲ್ಲಿಯಲ್ಲಿ ಇಂಡಿಯಾ ರಾಜಕೀಯ ಒಕ್ಕೂಟದ ಮುಖಂಡರಿಗೆ ಔತಣಕೂಟ ಆಯೋಜಿಸಿದ್ದರು. ಈ ಔತಣಕೂಟಕ್ಕೆ ರಾಹುಲ್‌ಗಾಂಧಿ ಖುದ್ದು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು, ಸಚಿವ ಸಂಪುಟ ಸಭೆಯ ಬಳಿಕ ದಿಲ್ಲಿಗೆ ತೆರಳಿದರು. ಡಿ.ಕೆ. ಶಿವಕುಮಾರ್ ಅವರಿಗೆ ಔತಣಕೂಟಕ್ಕೆ ಆಹ್ವಾನವಿಲ್ಲದೇ ಇರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಮತಗಳ್ಳತನದ ವಿರುದ್ಧ, ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಅದರ ಕುರಿತು ಇಂಡಿಯಾ ಕೂಟದ ಮುಖಂಡರಿಗೆ ರಾಹುಲ್‌ಗಾಂಧಿ ಮಾಹಿತಿ ನೀಡಲಿದ್ದಾರೆ.

ರಾಹುಲ್‌ಗಾಂಧಿ ಅವರ ಪ್ರತಿಭಟನೆಯ ಪೂರ್ವ ತಯಾರಿಯ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಅತೀವ ಕಾಳಜಿ ವಹಿಸಿದ್ದು, ಯಾವುದೇ ಲೋಪಗಳಾಗಬಾರದು ಎಂಬ ಕಾರಣಕ್ಕೆ ಪದೇ-ಪದೇ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ಅನಾರೋಗ್ಯದ ನಡುವೆಯೂ ಡಿ.ಕೆ.ಶಿವಕುಮಾರ್ ಅವರ ಪಕ್ಷದ ಬದ್ಧತೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆಗೆ ಪಾತ್ರವಾಗಿದೆ. ಪ್ರತಿಭಟನೆಯ ಪೂರ್ವ ತಯಾರಿ ನಡುವೆಯು ಕೂಡ ಗುರುವಾರ ಮಧ್ಯಾಹ್ನ ಡಿ.ಕೆ. ಶಿವಕುಮಾರ್ ತೆಲಂಗಾಣ ರಾಜ್ಯ ಪ್ರವಾಸಕ್ಕಾಗಿ ಹೈದರಾಬಾದ್‌ಗೆ ತೆರಳಬೇಕಿತ್ತು. ಆದರೆ ಬೆಳಿಗ್ಗೆ ಇದ್ದಕ್ಕಿಂದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ನಾನು ಸಕ್ರಿಯನಾಗಿರುವುದರಿಂದ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇಂದಿನಿಂದ ಆ. 10ರ ವರೆಗೂ ಯಾರನ್ನೂ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಯಾರೂ ತಪ್ಪು ತಿಳಿಯಬಾರದು ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

36 seconds ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

13 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

10 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

11 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

12 hours ago