ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಶ್ವಾಸಕೋಶದ ಸಮಸ್ಯೆಯಿಂದ ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಿ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಇದೀಗ ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.




