ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಾವು ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದವರು, ಈಗಲೂ ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ.
ಹೀಗಿರುವಾಗ ಸರ್ಕಾರ ದ್ವೇಷದ ರಾಜಕಾರಣ ಮಾಡುವುದು ಬೇಡ. ಪೊಲೀಸರು ನಮ್ಮನ್ನು ಬಂಧಿಸಬಹುದು. ಆದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಒಂದು ಸಮುದಾಯ ಓಲೈಕೆ ಮಾಡಲು ಕಾಂಗ್ರೆಸ್‌ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕವನ್ನು ಬಾಂಗ್ಲಾದೇಶ ಮಾಡುತ್ತೇವೆ ಎಂದು ಹೇಳುವವರ ವಿರುದ್ಧ ಕೇಸ್ ಹಾಕಿಲ್ಲ. ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋವನ್ನೇ ನಾನು ಟ್ವೀಟ್‌ನಲ್ಲಿ ಹಾಕಿರುವುದು. ಅದಕ್ಕೆ ನನ್ನ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.