Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೇಕೆದಾಟು ಯೋಜನೆ ಬಗ್ಗೆ ಪ್ರಧಾನಿ ಮೋದಿ ಬಳಿ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ

ನವದೆಹಲಿ: ಸಚಿವರ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9 ಸಾವಿರ ಕೋಟಿ ರೂಪಾಯಿ ವೆಚ್ಚದ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿಯಿದ್ದು, ಆಸಕ್ತಿ ವಹಿಸಿ ಅನುಮತಿ ಕೊಡಿಸಲು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್‌ 2023-2024ರಲ್ಲಿ ಘೋಷಿಸಿದಂತೆ 5,300 ಕೋಟಿ ರೂ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರದಲ್ಲೇ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್‌ನ್ನು ಘೋಷಿಸುವಂತೆ ಕೂಡ ಮನವಿ ಪತ್ರದಲ್ಲಿ ಕೇಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ಅನುದಾನ ಕೊಡಲು ಮನವಿ ಮಾಡಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Tags: