ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಇದರ ಪ್ರಮುಖ ಗುರಿಯಾಗಿದೆ. ಈ ಕಾರ್ಯಕ್ರಮವು ಮುಖ್ಯಮಂತ್ರಿಗಳು ನಡೆಸುತ್ತಿರುವ ರಾಜ್ಯಮಟ್ಟದ ಎರಡನೇ ಕಾರ್ಯಕ್ರಮವಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ಜನತಾ ದರ್ಶನವನ್ನು ವಿಧಾನಸೌಧದ ಶಕ್ತಿ ಕೇಂದ್ರದ ಮುಂದೆ ನಡೆಸುತ್ತಿರುವುದು ವಿಶೇಷವಾಗಿದೆ.
ರಾಜ್ಯದ ಹಲವು ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಬರುವ ಜನರು ಸಮಸ್ಯೆಗಳನ್ನು ಹೊತ್ತು ತರುವ ಹಿನ್ನೆಲೆಯಲ್ಲಿ ಅವುಗಳನ್ನು ನಿರ್ವಹಿಸಲಿ ವ್ಯವಸ್ಥಿತವಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖಾ ವತಿಯಿಂದ ತಯಾರಿ ಮಾಡಿಕೊಂಡು ವಿಧಾನಸೌಧದ ಪೂರ್ವ ಭಾಗದ ಮೆಟ್ಟಿಲುಗಳನ್ನು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರು, ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆ, ಕುಂದು ಕೊರತೆ, ಮತ್ತು ದೂರುಗಳನ್ನು ಆಲಿಸಿ ಸ್ಥಳದಲ್ಲೇ ಬಗೆಹರಿಸಿ ಪರಿಹಾರವನ್ನು ನೀಡುವ ಉದ್ದೇಶವಾಗಿದ್ದು , ಜನಸ್ಪಂದನಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಬೇರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಡಿಪಿಎಆರ್ ಅಧಿಕಾರಿಗಳು ತಿಳಿಸಿದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…