Mysore
26
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ನೇಹಾ ಹಿರೇಮಠ ಮನೆಗೆ ಸಿಎಂ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್‌ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್‌ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ ಸಿದ್ದರಾಮಯ್ಯ ಮನೆಯಲ್ಲಿದ್ದ ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಂದೆ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದರು. ಮಗಳ ಸಾವಿನ ನೋವಿನಲ್ಲಿದ್ದ ನಿರಂಜನ ಹಿರೇಮಠ ಅವರ ಕೈಹಿಡಿದು ಸಿದ್ದರಾಮಯ್ಯ ಸಂತೈಸಿದರು.

ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ತಂದೆ ಹಾಗೂ ತಾಯಿ ಸಿದ್ದರಾಮಯ್ಯ ಬಳಿ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಪ್ರಕರಣದ ವಿಚಾರಣೆಗೆಂದು ವಿಶೇಷ ತಂಡವನ್ನು ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Tags:
error: Content is protected !!