ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತನಿಂದ ಹತ್ಯೆಗೊಳಗಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಇಂದು ( ಏಪ್ರಿಲ್ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೇಹಾಳ ತಂದೆ ಹಾಗೂ ತಾಯಿಗೆ ಸಾಂತ್ವನ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿನ ನೇಹಾ ಮನೆಗೆ ಭೇಟಿ ಕೊಟ್ಟ ಸಿದ್ದರಾಮಯ್ಯ ಮನೆಯಲ್ಲಿದ್ದ ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಂದೆ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದರು. ಮಗಳ ಸಾವಿನ ನೋವಿನಲ್ಲಿದ್ದ ನಿರಂಜನ ಹಿರೇಮಠ ಅವರ ಕೈಹಿಡಿದು ಸಿದ್ದರಾಮಯ್ಯ ಸಂತೈಸಿದರು.
ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ತಂದೆ ಹಾಗೂ ತಾಯಿ ಸಿದ್ದರಾಮಯ್ಯ ಬಳಿ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಪ್ರಕರಣದ ವಿಚಾರಣೆಗೆಂದು ವಿಶೇಷ ತಂಡವನ್ನು ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…