Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದು ಹಾಗೂ ಡಿಸಿಎಂ ಡಿಕೆಶಿ

ವಿಜಯಪುರ: ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಾಗಿನ ಸಮರ್ಪಿಸಿದರು.

ವಿಜಯಪುರ ಜಿಲ್ಲೆ ನಿಡಗುಂಡಿ ತಾಲ್ಲೂಕಿನ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ ನಂತರ ಸಂಪ್ರದಾಯದಂತೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಈ ವೇಳೆ ಸಚಿವ ಎಂ.ಬಿ.ಪಾಟೀಲ್‌, ಸಚಿವರಾದ ಶಿವಾನಂದ ಪಾಟೀಲ್‌, ಆರ್.ಬಿ.ತಿಮ್ಮಾಪುರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: