ರಾಜ್ಯ

ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾದರೆ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಸಭೆಯ ಇತರೆ ಮುಖ್ಯಂಶಗಳು ಹೀಗಿವೆ….
ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದ್ದು ಹೀಗೆ….

2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳಲ್ಲಿ. 60ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ.

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ.

ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು?
ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಿದರು.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್‌, ಎಚ್.ವಿ.ವೆಂಕಟೇಶ್‌, ಸುಧಾಮ್‌ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್‌ ಸಿದ್ದಿ, ಬಸವರಾಜ್‌, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್‌, ರಾಜು ವೇಣುಗೋಪಾಲ ನಾಯಕ್‌, ಡಾ.ಉಮೇಶ್‌ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

15 mins ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

31 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

51 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

2 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

3 hours ago