Mysore
32
scattered clouds

Social Media

ಮಂಗಳವಾರ, 26 ಮೇ 2026
Light
Dark

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ: ಕಾರಣ ಇಷ್ಟೇ

ಬೆಂಗಳೂರು: ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿ) ದರ ನಿಗದಿಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಲಕ್ಷಾಂತರ ಕೆಂಪು ಮೆಣಸಿನಕಾಯಿ ಬೆಳೆಗಾರರಿದ್ದಾರೆ. ಮಾರುಕಟ್ಟೆಯಲ್ಲಿ ಕೆಂಪು ಮೆಣಸಿನಾಕಯಿ ಬೆಲೆ ಕುಸಿತು ಕಂಡಿದ್ದು, ಇದರಿಂದ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕೂಡಲೇ ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿ ಮಾಡಿ ಎಂದು ಕೋರಿದ್ದಾರೆ.

ಆಂಧ್ರಪ್ರದೇಶದಲ್ಲಿ ಕೆಂಪು ಮೆಣಸಿನಕಾಯಿಗಳಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನು ಭಾರತ ಸರ್ಕಾರ ನಿಗದಿಪಡಿಸಿದೆ. ಉತ್ಪಾದನೆಯ ಶೇ 25 ರಷ್ಟರ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ 11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ) ನಿಗದಿಪಡಿಸಿದೆ. ಇದು ಸ್ವಾಗಾತಾರ್ಹವಾದರೂ, ರೈತರು ಎದುರಿಸುತ್ತಿರುವ ಸಂಕಷ್ಟ ಇನ್ನೂ ಪರಿಹಾರವಾಗಿಲ್ಲ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಒಣಮೆಣಸಿನಕಾಯಿ ಉತ್ಪಾದನೆ ಕ್ವಿಂಟಾಲ್‌ಗೆ 12,675ರೂ. ಇರುವುದಾಗಿ ಕರ್ನಾಟಕ ಕೃಷಿ ಬೆಲೆ ಆಯೋಗ ನಿಗದಿಪಡಿಸಿದೆ. ಆದರೆ, ರೈತರು ಪ್ರತಿ ಕ್ವಿಂಟಾಲ್‌ಗೆ 8,300 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇದು ರೈತರಿಗೆ ದೊಡ್ಡ ಒಡೆತ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಪಿಡಿಪಿ ದರ ಯೋಜನೆ ಜಾರಿಗೊಳಿಸುವುದು ಅನಿವಾರ್ಯ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Tags:
error: Content is protected !!