ಬೆಂಗಳೂರು: ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿ) ದರ ನಿಗದಿಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಸಂಬಂಧ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಲಕ್ಷಾಂತರ ಕೆಂಪು ಮೆಣಸಿನಕಾಯಿ ಬೆಳೆಗಾರರಿದ್ದಾರೆ. ಮಾರುಕಟ್ಟೆಯಲ್ಲಿ ಕೆಂಪು ಮೆಣಸಿನಾಕಯಿ ಬೆಲೆ ಕುಸಿತು ಕಂಡಿದ್ದು, ಇದರಿಂದ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕೂಡಲೇ ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿ ಮಾಡಿ ಎಂದು ಕೋರಿದ್ದಾರೆ.
ಆಂಧ್ರಪ್ರದೇಶದಲ್ಲಿ ಕೆಂಪು ಮೆಣಸಿನಕಾಯಿಗಳಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನು ಭಾರತ ಸರ್ಕಾರ ನಿಗದಿಪಡಿಸಿದೆ. ಉತ್ಪಾದನೆಯ ಶೇ 25 ರಷ್ಟರ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ 11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ) ನಿಗದಿಪಡಿಸಿದೆ. ಇದು ಸ್ವಾಗಾತಾರ್ಹವಾದರೂ, ರೈತರು ಎದುರಿಸುತ್ತಿರುವ ಸಂಕಷ್ಟ ಇನ್ನೂ ಪರಿಹಾರವಾಗಿಲ್ಲ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಒಣಮೆಣಸಿನಕಾಯಿ ಉತ್ಪಾದನೆ ಕ್ವಿಂಟಾಲ್‌ಗೆ 12,675ರೂ. ಇರುವುದಾಗಿ ಕರ್ನಾಟಕ ಕೃಷಿ ಬೆಲೆ ಆಯೋಗ ನಿಗದಿಪಡಿಸಿದೆ. ಆದರೆ, ರೈತರು ಪ್ರತಿ ಕ್ವಿಂಟಾಲ್‌ಗೆ 8,300 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇದು ರೈತರಿಗೆ ದೊಡ್ಡ ಒಡೆತ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಪಿಡಿಪಿ ದರ ಯೋಜನೆ ಜಾರಿಗೊಳಿಸುವುದು ಅನಿವಾರ್ಯ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…
ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…