ಬೆಂಗಳೂರು: ಇದೇ ಅಕ್ಟೋಬರ್.13ರಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ಸಚಿವ ಸಂಪುಟ ಪುನರ್ ರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಜ್ಯದಲ್ಲಿ ಈಗಾಗಲೇ ಸಚವ ಸಂಪುಟ ಪುನರ್ ರಚನೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್.13ರಂದು ಸಂಪುಟ ಸಹೋದ್ಯೋಗಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಬಿಹಾರ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಸಂಪುಟ ಪುನರ್ ರಚನೆ ಆಗುವುದು ಪಕ್ಕಾ ಎನ್ನಲಾಗುತ್ತಿದ್ದು, 15 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸ ತಂಡ ರಚನೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅಕ್ಟೋಬರ್.13ರಂದು ಏರ್ಪಡಿಸಿರುವ ಔತಣಕೂಟದಲ್ಲಿ ಚರ್ಚೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೆಲ ಸಚಿವರಿಗೆ ಢವ ಢವ ಶುರುವಾಗಿದೆ.





