ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಷ್ಟು ವರ್ಷದ ಹಳೆ ಕಸ ಇದು: ಕಣ್ಣಿಲ್ವಾ ನಿಮಗೆ: ಸಿಎಂ ಪ್ರಶ್ನೆ
ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ ತಲೆ ಎತ್ತರಕ್ಕೆ ಗಿಡಗಳು ಬೆಳೆದು ನಿಂತಿರುವುದಕ್ಕೆ ಸಿಎಂ ಗರಂ ಆದರು. ಇದು ತುಂಬಾ ಹಳೆ ತ್ಯಾಜ್ಯ…ಇಷ್ಟು ವರ್ಷ ಎಷ್ಟು ಜನ ಅಧಿಕಾರಿಗಳು ಇಲ್ಲಿ ಓಡಾಡಿರ್ತೀರಿ. ಯಾರಿಗೂ ಕಣ್ಣಿಗೇ ಬಿದ್ದಿಲ್ವಾ ಎಂದು ಸಿಎಂ ಪ್ರಶ್ನಿಸಿ 24 ಗಂಟೆಗಳ ಒಳಗೆ ತ್ಯಾಜ್ಯ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದರು. ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು: ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ
ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ : ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ
ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು. ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.
ಇದನ್ನು ಓದಿ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಮೀಕ್ಷಾದಾರರಿಗೆ ಮೊದಲ ಕಂತಿನ ಗೌರವಧನ ಬಿಡುಗಡೆ
ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು. ಆದರೆ ಹೇಳೋರು ಕೇಳೇರು ಇಲ್ಲದಂತೆ ಗುತ್ತಿಗೆದಾರರು ವರ್ತಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದರು. ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ ನೀಡಿದರು.
ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಿಂದ ಹೊರಗೆ ಬಂದು ಕುಳಿತಿರಿವ ತ್ಯಾಜ್ಯ: ಬಿ ಸ್ಮೈಲ್ ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸಿಎಂ ಸೂಚನೆ
ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಸಿಎಂ ಬಿ ಸ್ಮೈಲ್ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು
ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮತ್ತೋರ್ವ ಎಂಜಿನಿಯರ್ ಚೀಫ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸಿಎಂ ಸೂಚಿಸಿದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…