Mysore
26
moderate rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ. ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು. ಯಾವ ಕಾರಣಕ್ಕೆ ಉಚ್ಛಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು. ಅಬ್ದುಲ್‌ ಜಬ್ಬಾರ್‌ ಸಹ ರಾಜೀನಾಮೆ ಕೊಟ್ಟಿದ್ದಾರೆ. ಆ ಜಾಗಕ್ಕೆ ಮುಸ್ಲಿಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್‌ ನಿರ್ಧರಿಸಬೇಕು ಎಂದು ತಿಳಿಸಿದರು.

Tags:
error: Content is protected !!